ಜಿ ಎನ್ ಮೋಹನ್‌ರ ‘ಪ್ರಶ್ನೆಗಳಿರುವುದು ಷೇಕ್ಸ್‌ಪಿಯರನಿಗೆ’ ಪುಸ್ತಕಕ್ಕೆ ಈ ಸಲದ ಪುತಿನ ಕಾವ್ಯಪ್ರಶಸ್ತಿ ಬಂದಿದ್ದು ನಿಮಗೆ ಗೊತ್ತು. ನಿನ್ನೆ(ಬುಧವಾರ) ಸಂಜೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಿತ್ತು. ಬೆಂಗಳೂರಿನ ವರ್ಲ್ಡ್‌ಕಲ್ಚರ್ ಇನ್ಸಿಟ್ಯೂಟ್‌ನಲ್ಲಿ ಸನ್ಮಾನದ ಜತೆಗೆ ಪುಸ್ತಕದ ಎರಡನೇ ಆವೃತ್ತಿಯ ಬಿಡುಗಡೆಯೂ ಆಯಿತು. ಪದ್ಯದ ಪುಸ್ತಕ ಎರಡನೇ ಆವೃತ್ತಿ ಕಂಡ ಸಡಗರದಲ್ಲಿ ಮುಖಪುಟವನ್ನು ಕೊಂಚ ಹೊಸದಾಗಿಸಲಾಗಿದೆ. ಹೊಸ ಹಳೆಯ ಎರಡೂ ವಿನ್ಯಾಸ ಇಲ್ಲಿವೆ. ನಿಮಗೇನನ್ನಿಸಿತು ಹೇಳಿ. ಅದೇ ಹೊತ್ತಿನಲ್ಲಿ ಮೇಫ್ಲವರ್ ಅಲ್ಲಿ ಬಂದಿದ್ದ ಎಲ್ಲರಿಗೂ ಪುತಿನರ ನೆನಪಿನ ಶುಭಾಶಯಪತ್ರವನ್ನು ಉಚಿತವಾಗಿ ವಿತರಿಸಿತು. ಆ ಚಿತ್ರವೂ ಕೆಳಗಿದೆ.
ಮೋಹನ್‌ಗೆ ಅಭಿನಂದನೆಗಳು.


2 comments:
"ಪ್ರಶ್ನೆಗಳಿರುವುದು ಷೇಕ್ಸ್‌ಪಿಯರನಿಗೆ" ಪದ್ಯದ ಕೃತಿ ಸಂಕಲನಕ್ಕೆ ಪುತಿನ ಕಾವ್ಯ ಪ್ರಶಸ್ತಿ ಬಂದಿರುವುದು ಸಂತೋಷದ ವಿಚಾರ......
ಜಿ.ಎನ್.ಮೋಹನ್ ಸರ್‌ಗೆ ಅಭಿನಂದನೆಗಳು.....
ಎರಡು ಪುಸ್ತಕ ವಿನ್ಯಾಸಗಳು ಚೆನ್ನಾಗಿವೆ....ಮುಂದುವರಿಸಿ...ಥ್ಯಾಂಕ್ಸ್....
ಎರಡನೆಯದು ಮೊದಲದ್ದಕ್ಕಿಂತಲೂ ಚೆನ್ನಾಗಿದೆ...
Post a Comment